ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಜಡೇನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದಾರೆ.
ಮೃತರನ್ನ ತಾಯಿ ನಾಗಮ್ಮ, 10 ವರ್ಷದ ಬಾಲಿ ಗಂಗೋತ್ರಿ ಹಾಗೂ 3 ವರ್ಷದ ಶ್ರೀನಿಧಿ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.