ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಸ್ಕಾಂ ನಿರ್ಲಕ್ಷ್ಯದಿಂದ ಬೆಂಗಳೂರಿನಲ್ಲಿ ತಾಯಿ ಮಗು ಮೃತಪಟ್ಟಿದ್ದಾರೆ. ವೈಟ್‌ಫೀಲ್ಡ್‌ನ ಕಾಡುಗೋಡಿಯಲ್ಲಿ ತಾಯಿ ಮಗಳು ಬೆಳಗಿನ ಜಾವ ರಸ್ತೆ ಬದಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ಕರೆಂಟ್ ಲೈನ್ ತುಳಿದು ಮೃತಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಐವರು ಬೆಸ್ಕಾಂ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಾರ್ಯ ನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ತಮಿಳುನಾಡು ಮೂಲದ ತಾಯಿ ಸೌಂದರ್ಯ ಹಾಗೂ ಮಗಳು ಲಿಯಾ ದೀಪಾವಳಿಗೆಂದು ಚೆನ್ನೈಗೆ ಹೋಗಿದ್ದರು. ಅಲ್ಲಿಂದ ವಾಪಾಸಾಗುವಾಗ ಬೆಳಗಿನ ಜಾವ 5 ಗಂಟೆಗೆ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.