ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳನ್ನು ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ವೈಟ್‌ಫೀಲ್ಡ್‌ನ ಕಾಡುಗೋಡಿಯಲ್ಲಿ ನಿನ್ನೆ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಒಂಭತ್ತು ತಿಂಗಳ ಮಗು ಮೃತಪಟ್ಟಿತ್ತು. ಈ ದುರಂತಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಪೊಲೀಸರು ಐವರು ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಬಂಧಿತ ಐವರು ಅಧಿಕಾರಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.