ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಯಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ. ಗೀತಾ (42) ಮತ್ತು ಅವರ ಪುತ್ರಿ ಪ್ರಿಯಾಂಕಾ (20) ಅವರ ಮೃತದೇಹಗಳು ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿವೆ.
ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಈ ಘಟನೆ ನಡೆದಿದೆ. ಆಶ್ರಮದ ಅರ್ಚಕ ಸುರೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ.
ಸಣ್ಣ ನೀರಿನ ಟ್ಯಾಂಕ್ ನಲ್ಲಿ ಬಿದ್ದು ತಾಯಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ನಂಬಲಾಗಿದೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.