May 15, 2026
Friday, May 15, 2026
spot_img

ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳಗಿ ಸಾ*ವು

ಹೊಸದಿಗಂತ ವರದಿ, ಬೆಳಗಾವಿ :

ಜಿಲ್ಲೆಯ ಸಂಕೇಶ್ವರ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಈಜಲು ಹೋದ ಮಗು ನೀರಿನ ಸೆಳೆತಕ್ಕೆ ಸಿಲುಕಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ನದಿ ತೀರದಲ್ಲಿ ಮಗು ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿದ್ದನು. ಈ ವೇಳೆ ಮಗನನ್ನು ಉಳಿಸಲು ತಾಯಿ ನದಿಗೆ ಇಳಿದಿದ್ದಾರೆ. ಆದರೆ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ತಾಯಿಯ ಮೃತದೇಹ ಸಿಕ್ಕಿದ್ದು, ಮಗನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !