May 5, 2026
Tuesday, May 5, 2026
spot_img

ಜಾರ್ಖಂಡ್‌ನಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ: ತಾಯಿ, ನವಜಾತ ಶಿಶು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನಲ್ಲಿ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳು ಮೊಬೈಲ್ ಟಾರ್ಚ್ ಬಳಸಿ ಹೆರಿಗೆ ಮಾಡಲು ಮುಂದಾಗಿದ್ದು, ಈ ವೇಳೆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿದ್ದಾರೆ .

ಮೃತರನ್ನು ಹತಿಸಿರಿಂಗ್ ಗ್ರಾಮದ ನಿವಾಸಿ,ಆರೋಗ್ಯ ಸಹಾಯಕಿ ಬಿನಿತಾ ಬನ್ರಾ ಎಂದು ಗುರುತಿಸಲಾಗಿದೆ.

ಹೆರಿಗೆಯ ಸಮಯದಲ್ಲಿ ವಿದ್ಯುತ್ ಕಡಿತಗೊಂಡಿದ್ದರಿಂದ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಮೊಬೈಲ್ ಟಾರ್ಚ್‌ಲೈಟ್ ಬಳಸಿ ಹೆರಿಗೆ ಮಾಡಿದ್ದಾರೆ. ಈ ವೇಳೆ ಮಹಿಳೆಯ ಅರೋಗ್ಯ ಹದೆಗೆಟ್ಟಿದ್ದು ಸಕಾಲದಲ್ಲಿ ಉನ್ನತ ಚಿಕಿತ್ಸೆ ವಿಫಲರಾಗಿದ್ದಾರೆ. ಇದರಿಂದಾಗಿ ತಾಯಿ ಮತ್ತು ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ.

ಇತ್ತ ಘಟನೆಯಿಂದ ನೊಂದ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಈ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಈ ಕುರಿತು ತನಿಖೆಗೆ ಜಿಲ್ಲಾಡಳಿತ ಆದೇಶಿಸಿದೆ. ಇದಕ್ಕಾಗಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಉಪ ಆಯುಕ್ತ ನಿತೀಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ಘಟನೆಯ ಬಳಿಕ ಪ್ರಭಾರಿ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಕುಮಾರ್ ಸಿಂಗ್ ಅವರನ್ನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !