January15, 2026
Thursday, January 15, 2026
spot_img

ಮದುವೆ ಬೇಡ ಎಂದ ಎರಡು ಮಕ್ಕಳ ತಾಯಿಯನ್ನು ಇರಿದು ಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವ್ಯಕ್ತಿಯೊಬ್ಬ ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ಹೊರವಲಯದ ಬಂಗಾರಪೇಟೆ ಜಿಗ್ ಜಾಗ್ ರಸ್ತೆಯಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ಕತ್ತಹಳ್ಳಿ ಗ್ರಾಮದ ಸುಜಾತ (27) ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ಹೊಸಕೋಟೆ ಇಂಡಸ್ ಬ್ಯಾಂಕ್‍ನ ಉದ್ಯೋಗಿ ಚಿರಂಜೀವಿ ಎಂದು ಗುರುತಿಸಲಾಗಿದೆ. ಆರೋಪಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುವಾಗ ಹಣವಸೂಲಿಗೆ ಹೋಗುತ್ತಿದ್ದಾಗ ಮಹಿಳೆಗೆ ಪರಿಚಯವಾಗಿದ್ದ ಎಂದು ತಿಳಿದು ಬಂದಿದೆ. ಕೃತ್ಯ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಚಿರಂಜೀವಿಯನ್ನ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಕತ್ತಿಹಳ್ಳಿಯಿಂದ ನರಸಾಪುರ ಕೈಗಾರಿಕಾ ಪ್ರದೇಶದ ಕಡೆ ಕೆಲಸಕ್ಕೆ ಹೊರಟಿದ್ದ ಮಹಿಳೆಯನ್ನು ಕೋಲಾರದ ಬಳಿ ಆರೋಪಿ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರಿಗೂ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಸುಜಾತ ಗಂಡನನ್ನು ತೊರೆದು ಪ್ರತ್ಯೇಕವಾಗಿ ವಾಸವಾಗಿದ್ದಳು. ಕಳೆದ ಕೆಲವು ದಿನಗಳಿಂದ ಚಿರಂಜೀವಿ ಸುಜಾತಾಳನ್ನ ಮದುವೆಯಾಗುವಂತೆ ಬಲವಂತ ಮಾಡುತ್ತಿದ್ದ. ಇದಕ್ಕೆ ಸುಜಾತ ಒಪ್ಪಿರಲಿಲ್ಲ. ಹಾಗಾಗಿ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು.

ಕಳೆದ ರಾತ್ರಿ ಸಹ ಸುಜಾತಳ ಗ್ರಾಮಕ್ಕೆ ತೆರಳಿ ಮನೆ ಬಳಿ ಆರೋಪಿ ಹೋಗಿದ್ದ. ಈ ವೇಳೆ ಸುಜಾತ ಈತನನ್ನ ನಿರ್ಲಕ್ಷಿಸಿದ್ದಳು. ಇದರಿಂದ ಕೋಪಗೊಂಡ ಪಾಗಲ್ ಪ್ರೇಮಿ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಇನ್ನೂ ನರಸಾಪುರದಲ್ಲಿ ಸ್ಟಾಫ್ ನರ್ಸ್ ಆಗಿದ್ದ ಸುಜಾತ, ಕಳೆದ ಮೂರು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದಳು. ಈ ಹಿಂದೆಯೂ ಹಣಕಾಸು ವಿಚಾರಕ್ಕೆ ಸುಜಾತ ಮೇಲೆ ಆರೋಪಿ ಹಲ್ಲೆ ಮಾಡಿದ್ದ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Most Read

error: Content is protected !!