ಹೊಸದಿಗಂತ ವರದಿ ಬಂಟ್ವಾಳ:
ಬಿ.ಸಿ.ರೋಡು- ಪುಂಜಾಲಕಟ್ಟೆ ರಾ.ಹೆ.ಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11 ರಂದು ಮುಂಜಾನೆ ತಾಯಿ- ಮಗಳಿಗೆ ಚೂರಿ ತೋರಿಸಿ ಚಿನ್ನಾಭರಣಗಳ ದೋಚಿದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಈ ಸಂಬಂಧಿಸಿದ 7 ಮಂದಿಯನ್ನು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮಯಾನೆ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಉಳ್ಳಾಲ ತಾಲೂಕಿನ ಇರಾ ಗ್ರಾಮದವನಾಗಿದ್ದು, ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಗೌರಿಕಾಲುವೆ ನಿವಾಸಿ ಮಹಮ್ಮದ್ ಹನೀಫ್ (49) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 3,15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತಗಯಕ್ಕೆ ಬಳಸಿದ ಎರಡು ಕಾರನ್ನು ವಶಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಧರ್ಮಪ್ಪ, ಮತ್ತು ರಾಜೇಂದ್ರರವರ ಮುಂದಾಳತ್ವದಲ್ಲಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ . ವಿಜಯಪ್ರಸಾದ್ ರವರ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ ಬಿ, ಪುಂಜಾಲಕಟ್ಟೆ ಠಾಣೆಯ ಎಸ್ ಐ. ನಂದಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣೆಯಎಸ್.ಐ.ಗಳಾದ ಹರೀಶ ಎಂ.ಆರ್. ನೇತೃತ್ವದ 3 ವಿಶೇಷ ಪತ್ತೆದಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎ.ಎಸ್.ಐ. ಗಿರೀಶ್, ಹೆಚ್.ಸಿ. ಗಳಾದ ಸುಜು, ರಾಧಾಕೃಷ್ಣ, ಉದಯ ರೈ, ಅದ್ರಾಮ, ಪ್ರವೀಣ್ ರೈ, ಪ್ರವೀಣ್, ಸಂದೀಪ್, ರಾಹುಲ್, ಇರ್ಷಾದ್, ರಾಜೇಶ್, ಹರಿಶ್ಚಂದ್ರ, ಪಿ.ಸಿ.ಗಳಾದ ಪುನೀತ್, ರಮ್ಜಾನ್, ಯೊಗೇಶ್ ಡಿ.ಎಲ್, ಕುಮಾರ್ ಹೆಚ್. ಕೆ., ವಿನಾಯಕ ಬಾರ್ಕಿ, ಜಗದೀಶ ಅತ್ತಾಜೆ, ಜಮೀರ್ ಕಲಾರಿ, ಎ.ಹೆಚ್.ಸಿ.ಗಳಾದ ಕುಮಾರ್, ಮಹಾಂತೇಶ್, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ರವರುಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಗಳ ಪೈಕಿ ಗಣೇಶ ನಾಯ್ಕ ಎಂಬಾತನು 2023ನೇ ಸಾಲಿನಲ್ಲಿ ಮಂಗಳೂರು ನಗರ ವ್ಯಾಪ್ತಿಯ ಮುಲ್ಕಿಯಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವುಗೈದ ಪ್ರಕರಣದ ಮುಖ್ಯ ಆರೋಪಿಯಾಗಿದ್ದು, ಉಳಿದಂತೆ ಸೀತಾರಾಮ ಯಾನೆ ಪ್ರವೀಣ್, ಸುಧೀರ್ ಹಾಗು ಮಹಮ್ಮದ್ ಹನೀಫ್ ರವರ ವಿರುದ್ದ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.
ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಹುಮಾನವನ್ನು ಘೋಷಿಸಿದ್ದು,ಈ ಘಟನೆಯ ಬಗ್ಗೆ ಯೂವುದೇ ಸುಳಿವು ಇಲ್ಲದೆಯು ಪ್ರಕರಣ ಬೇಧಿಸಿರುವ ಪೊಲೀಸರ ಕಾರ್ಯ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿರುತ್ತದೆ.