ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.
ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ ಎಂದು ಡಿಸಿಎಂ ಡಿಕೆ. ಶಿವಕುಮಾರ್ ಹೇಳಿದ್ದಾರೆ.
ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ. ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕಾರ್ಯ ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿ ಉಳಿಯಲಿದೆ. ಓಂ ಶಾಂತಿ ಎಂದಿದ್ದಾರೆ.
ಉಸಿರುಚೆಲ್ಲಿದ ವೃಕ್ಷಮಾತೆ: ಡಿಕೆಶಿ ತೀವ್ರ ಸಂತಾಪ

