ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.