Sunday, March 26, 2023

Latest Posts

ಸಚಿವ ಆರಗ ಜ್ಞಾನೇಂದ್ರ ಎಸ್ಕಾರ್ಟ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು, ಸಾರ್ವಜನಿಕರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನದಲ್ಲಿ ಗೃಹ ಸಚಿವ ಎಸ್ಕಾರ್ಟ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಗಂಡಸಿಯ ರಮೇಶ್ ಬಂಕ್‌ನಿಂದ ಪೆಟ್ರೋಲ್ ಹಾಕಿಸಿಕೊಂಡು ಬರುವಾಗ ಅಪಘಾತ ಸಂಭವಿಸಿದೆ.

ಸಚಿವ ಆರಗ ಜ್ಞಾನೇಂದ್ರ ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಸಚಿವರಿಗೆ ಡಿಆರ್ ಇನ್ಸ್‌ಪೆಕ್ಟರ್ ರಾಮು ಎಸ್ಕಾರ್ಟ್ ಮಾಡುತ್ತಿದ್ದರು. ಅಪಘಾತದ ವಿಷಯ ತಿಳಿದರೂ ಆರಗ ಜ್ಞಾನೇಂದ್ರ ಅವರು ವಾಹನ ನಿಲ್ಲಿಸದೆ ತೆರಳಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!