ಉತ್ತರ ಗಾಜಾದಿಂದ ದಕ್ಷಿಣಕ್ಕೆ ತೆರಳಿ…ಇಲ್ಲವೇ ನೀವೂ ಕೂಡ ಉಗ್ರರೆಂದು ಪರಿಗಣಿಸುತ್ತೇವೆ: ಇಸ್ರೇಲ್ ಎಚ್ಚರಿಕೆಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಗಾಜಾದಿಂದ ದಕ್ಷಿಣಕ್ಕೆ ತೆರಳುವಂತೆ ಪ್ಯಾಲೆಸ್ತೀನಿಯನ್ನರಿಗೆ ಇಸ್ರೇಲ್​ ಹೇಳಿದೆ.

ಗಾಜಾದ ಉತ್ತರ ಭಾಗದಲ್ಲಿರುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ, ನಿಮಗೆ ಈಗಾಗಲೇ ದಕ್ಷಿಣಕ್ಕೆ ತೆರಳುವಂತೆ ನಾವು ಕೇಳಿಕೊಂಡಿದ್ದಾಗಿದೆ. ಇನ್ನೂ ನೀವು ಈ ಜಾಗವನ್ನು ಬಿಟ್ಟು ಹೋಗಿಲ್ಲ ಎಂದಾದರೆ ನಿಮ್ಮನ್ನು ಉಗ್ರರೆಂದು ಪರಿಗಣಿಸಲಾಗುತ್ತದೆ ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ.

ಇಂದು ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ.

ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು. ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಗುಂಪು ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!