ರಾಜ್ಯ ರಾಜಕಾರಣದಲ್ಲಿ ಸಂಚಲನ: ಆ.23ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ನಾಳೆ(ಆಗಸ್ಟ್​ 19) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ಇದರ ಮಧ್ಯ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿಗೆ ತೆರಳಲಿದ್ದು, ಪ್ರಾಸಿಕ್ಯೂಷನ್ ವಿಚಾರದ ಬಗ್ಗೆ ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ದೆಹಲಿಗೆ ತೆರಳುವ ಒಂದು ದಿನ ಮುನ್ನ ಅಂದರೆ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಕೆಲ ರಾಜ್ಯ ರಾಜಕಾರಣದ ಬೆಳವಣಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಎಲ್ಲಾ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ.

ರಾಜ್ಯಪಾಲರ ಆದೇಶದಕ್ಕೆ ತಡೆ ನೀಡುವಂತೆ ಹೈಕೋರ್ಟ್​ ನಾಳೆ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಹೈಕೋರ್ಟ್​ ನಿರಾಕರಿಸಿದರೆ ಸುಪ್ರೀಂಕೋರ್ಟ್​ ಮೆಟ್ಟಿಲೇರಲಿದ್ದಾರೆ. ಇದರ ನಡುವೆ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!