Sunday, December 4, 2022

Latest Posts

ರಸ್ತೆ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಕಾರು ಮೂವರ ಸಾವು, ಓರ್ವನಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದ ನಿವಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಬಿಶನ್ಪುರ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ.

ಮೃತರು ಪಾರ್ಟಿಯಿಂದ ಹಿಂತಿರುಗುತ್ತಿದ್ದರು ಎಂಬ ಮಾಹಿತಿ ದೊರೆತಿದ್ದು, ಗ್ಯಾಸ್ ಕಟರ್‌ಗಳನ್ನು ಬಳಸಿ ವಾಹನದಿಂದ ಶವಗಳನ್ನು ಹೊರತೆಗೆಯಲು 6 ಗಂಟೆಗಳ ಕಾಲ ಬೇಕಾಯಿತು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಸಂತೋಷ್ ಪಟೇಲ್ ಹೇಳಿದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!