ಹೊಸದಿಗಂತ ಹುಬ್ಬಳ್ಳಿ:
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಖಃ ಉಂಟಾಗಿದೆ. ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು ಎಂದು ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಅಂತಾರಾಷ್ಟ್ರೀಯ ಸಂಸ್ಥೆಗಳಾದ ವಿಶ್ವ ಸಂಸ್ಥೆ, ಐಎಂಎಫ್ ನಲ್ಲಿ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದರಿಂದ ಈ ದೇಶವನ್ನು ಉಳಿಸಲು ಸಾಧ್ಯವಾಯಿತು. ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಕೆಲಸ ಮಾಡಿದ್ದು, ಈ ದೇಶದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಕಾರಣವಾಗಿದೆ. ದೇಶ ಆರ್ಥಿಕವಾಗಿ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಮನಮೋಹನ್ ಸಿಂಗ್ ಭದ್ರ ಬುನಾದಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.