Wednesday, November 30, 2022

Latest Posts

ಮಹಿಳೆ ಮೇಲೆ ಅತ್ಯಾಚಾರ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಬಲ್‍ಪುರ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಕ್ಷಿಯ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಧಾರ್‌ನ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧಗಳು) ಮತ್ತು 498 (ವಿವಾಹಿತ ಮಹಿಳೆಯನ್ನು ಕ್ರಿಮಿನಲ್ ಉದ್ದೇಶದಿಂದ ಆಮಿಷವೊಡ್ಡುವುದು/ಕರೆದುಕೊಂಡು ಹೋಗುವುದು/ಬಂಧನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಂಗ್ರೆಸ್‌ ಪಕ್ಷದ ಸಿಂಘಾರ್ ಅವರು ಮಧ್ಯಪ್ರದೇಶ ವಿಧಾನಸಭೆಯಲ್ಲಿ ಗಂಧ್ವಾನಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರು 2019-2020 ರವರೆಗೆ ರಾಜ್ಯದ ಮಾಜಿ ಅರಣ್ಯ ಸಚಿವರಾಗಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!