ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ, ಬಾಡೂಟಕ್ಕೆ ಜನರು ಮುಗಿಬಿದ್ದಿದ್ದಾರೆ. ಇದರ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ, ಕೆಲವರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದ ಹೊರವಲಯದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಜನರಿಗಾಗಿ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು.
ಬಗೆಬಗೆಯ ಬಾಡೂಟ ಖಾದ್ಯಕ್ಕಾಗಿ ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಸಮಾರಂಭಕ್ಕೆ ಬಂದಿದ್ದ ಕಾರ್ಯಕರ್ತರಿಗೆ ಬಾಡೂಟದ ಜೊತೆಗೆ ಮದ್ಯವನ್ನೂ ಕೂಡ ನೀಡಲಾಗಿತ್ತು. ಎಣ್ಣೆ ಪಡೆದುಕೊಳ್ಳಲು ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಈ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಹೇಳುವುದು ಒಂದು ಮಾಡುವುದು ಇನ್ನೊಂದು, ನಂಬುವುದು ಹೇಗೋ ಕಾಣೆ….
ರಾಜ್ಯ ಡೆಂಗಿ ಪೀಡಿತವಾಗಿರುವಾಗ ಬಿಜೆಪಿ ನಾಯಕರು ಮದ್ಯ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ನಾನು ಮಂಗಳೂರಿಗೆ ಭೇಟಿ ಕೊಟ್ಟಾಗ ಈಜು ಕೊಳದಲ್ಲಿ ಈಜಿದ್ದನ್ನೇ ಪ್ರಶ್ನಿಸಿದ ಬಿಜೆಪಿ ನಾಯಕರು ಈಗೆಲ್ಲಿದ್ದಾರೆ ? ಇದೇನಾ ನಿಮ್ಮ ಸಂಸ್ಕ್ರತಿ ?@DrSudhakar_ @BJP4Karnataka pic.twitter.com/RK67AQhFxx— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 7, 2024
ದಿನೇಶ ಗೂಂಡೂ(?) ರಾವ್ ಸಹಿತ ಎಲ್ಲಾ ರಾಜಕಾರಣಿಗಳ ಬಾಲಗಳು ಇಂತಹ ಸಂಸ್ಕ್ಕೃತಿಯವರೇ.ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರಿಗೆ ಯಾವತ್ತೂ ಸಮಸ್ಯೆಗಳಾ
ಗುರುತು ಈ ದಂಡಪಿಂಡಗಳಿಂದಲೇ.