ಹೊಸದಿಗಂತ ವರದಿ ಕಲಬುರಗಿ:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇಂದು ಬಿಸಿಲಿನ ತಾಪಕ್ಕೆ ಸಂಸದ ಡಾ.ಉಮೇಶ್ ಜಾಧವ್ ಬಿದ್ದಿದ್ದಾರೆ.
ಕಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಇಲ್ಲಿಗೆ ಜಾಧವ್ ಭೇಟಿ ನೀಡಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.