ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರ್ಹತೆ ಇಲ್ಲದ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಈರಣ್ಣ ಕಡಾಡಿ ಒತ್ತಾಯಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿನ ಅತಿಯಾದ ವಾಣಿಜ್ಯೀಕರಣವು ಈ ವೃತ್ತಿಯ ಘನತೆಯನ್ನು ಅಪಾಯಕ್ಕೆ ಸಿಲುಕಿಸಿದೆ. ವೈದ್ಯಕೀಯ ಕಾಲೇಜುಗಳ ಹೆಚ್ಚಿನ ಶುಲ್ಕಗಳು, ಆರೋಗ್ಯ ಸೇವೆಗಳ ಖಾಸಗೀಕರಣವು ಮಾರುಕಟ್ಟೆ ಆಧಾರಿತ ವ್ಯವಸ್ಥೆಯಾಗಿ ಪರಿವರ್ತನೆಗೊಂಡಿದೆ ಎಂದು ಹೇಳಿದ್ದಾರೆ.