ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ಬಿಜೆಪಿ ಆದೇಶವನ್ನು ಹೊರಡಿಸಿದೆ.
ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಆಯ್ಕೆ ಪಟ್ಟಿಯನ್ನು ನೀಡಿದ್ದಾರೆ.
ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.