ಗ್ರಾಪಂ ಚುನಾವಣೆಯಲ್ಲಿ ಗೆದ್ದ ಮಹಿಳೆಯರ ಬದಲಾಗಿ ಪ್ರಮಾಣವಚನ ಸ್ವೀಕರಿಸಿದ ಪತಿಯಂದಿರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಟ್ಟಾ ಬ್ಲಾಕ್‌ನ ಗೈಸಾಬಾದ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಪಂಚಾಯತಿ ಚುನಾವಣೆಯಲ್ಲಿ ವಿಜೇತರಾದ ಮಹಿಳೆಯರ ಬದಲಾಗಿ ಅವರ ಪತಿಯಂದಿರು ಪ್ರಮಾಣವಚನ ಸ್ವೀಕರಿಸಿದ್ದಾರೆ!.
ಜೂನ್‌ 28ರಿಂದ ಜುಲೈ 8ರ ನಡುವೆ ನಡೆದಿದ್ದ ಪಂಚಾಯತ್‌ ಚುನಾವಣೆಯಲ್ಲಿ ಒಟ್ಟು 11 ಮಹಿಳೆಯರು ಆಯ್ಕೆಯಾಗಿದ್ದರು. ನೂತನ ಸದಸ್ಯರ ಪ್ರಮಾಣವಚನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಆದರೆ ಚುನಾಯಿತ ಮಹಿಳಾ ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಂದೇ ಇರಲಿಲ್ಲ. ಅವರ ಬದಲಿಗೆ ಅವರ ಗಂಡಂದಿರು ಆಗಮಿಸಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋ ಅಂತರ್ಜಾಲದಲ್ಲಿ ಭಾರೀ ವೈರಲ್ ಆಗಿದ್ದು, ಜಿಲ್ಲಾ ಪಂಚಾಯತ್ ಸಿಇಒ ಅಜಯ್ ಶ್ರೀವಾಸ್ತವ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ನಂತರ ಚುನಾಯಿತ ಮಹಿಳೆಯರಿಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸೇರುವಂತೆ ತಿಳಿಸಿ, ಪಂಚಾಯತ್ ಸಿಇಒ ಮಹಿಳೆಯರಿಗೆ ಪ್ರಮಾಣ ವಚನವನ್ನು ಮರು ಬೋಧಿಸಿದರು.
ಗೈಸಾಬಾದ್ ಗ್ರಾಮದಲ್ಲಿ ನಡೆದಿರುವ ಕಾನೂನುಬಾಹಿರ ಚಟುವಟಿಕೆ ನಮ್ಮ ಗಮನಕ್ಕೆ ಬಂದಿದೆ. ಘಟನೆಯ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಕೇಳಲಾಗಿದೆ. ಇದಕ್ಕೆ ಕಾರಣರಾದವರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆʼ ಎಂದು ಶ್ರೀವಾಸ್ತವ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!