ಹೊಸದಿಂಗತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ರಾಜಕೀಯ ಪಕ್ಷಗಳು ಕಸರತ್ತು ಹೆಚ್ಚಿಸಿವೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಬಿಡದಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಾರು ಒಂದು ಗಂಟೆಗಳ ಕಾಲ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕುರಿತು ಚರ್ಚೆ ನಡೆಸಿದರು.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಹೆಚ್ಚುವರಿಯಾಗಿ, ಸಂಸದ ಪ್ರತಾಪ್ ಸಿಂಹ ಅವರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪಿಗಳಿಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ನಡೆಯುತ್ತಿರುವ ತನಿಖೆಯ ನಂತರ ಮೈಸೂರು-ಕೊಡಗು ಲೋಕಸಭೆ ಟಿಕೆಟ್ ಕೈತಪ್ಪುವ ನಿರೀಕ್ಷೆಯಿದೆ.
ಮೈಸೂರು ಕ್ಷೇತ್ರದತ್ತ ಜೆಡಿಎಸ್ ಒಲವು ತೋರುತ್ತಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಂಸದ ಪ್ರತಾಪ್ ಸಿಂಹ ಸಭೆ ನಡೆಸಿರುವುದು ಗಮನಾರ್ಹ.