ಇಂದು ಬೌದ್ಧ ಸಂಪ್ರದಾಯದಂತೆ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿವಿಧಾನದಂತೆ ಇಂದು ಮೈಸೂರಿನಲ್ಲಿ ನಡೆಯಲಿದೆ.

ಬೆಂಗಳೂರಿನ ಮಹಾಬೋದಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಗರದ ಅಶೋಕಪುರಂ ಡಾ. ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ರಾಜಕೀಯ ಗಣ್ಯರು, ಅಭಿಮಾನಿಗಳು, ಕುಟುಂಬದವರು ಇಂದು ಕಣ್ಣೀರಿನ ವಿದಾಯ ಹೇಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!