ದೇವಿ ಮುಂದೆಯೇ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿರುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ.

ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮರಾಜನಗರದ ನೂತನ ಸಂಸದ ಸುನೀಲ್ ಬೋಸ್ ಮತ್ತು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿ ಬೆಂಬಲಿಗರ ಸಮ್ಮುಖದಲ್ಲೇ ಸುನೀಲ್ ಬೋಸ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರ ಹಣೆಗೆ ಕುಂಕುಮ ಇಟ್ಟಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ನಾಮಪತ್ರದ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಬಿಜೆಪಿ ಸದಸ್ಯರು ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ನೀಡಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು. ಇದೀಗ ದೇವರ ಮುಂದೆಯೇ ಅದೇ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿರುವುದು ಸಂಚಲನ ಮೂಡಿಸಿದೆ.

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಅಲ್ಲದೇ ಸಾರ್ವಜನಿಕರ ಮುಂದೆಯೇ ಓರ್ವ ಮಹಿಳಾ ಸರ್ಕಾರಿ ಅಧಿಕಾರಿಗೆ ಕುಂಕುಮ ಇಟ್ಟಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!