ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು, ಇನ್ನೊಂದು ತಿಂಗಳಿನಲ್ಲಿ ಮದುವೆ ನಡೆಯಲಿದೆ.
ತೇಜಸ್ವಿ ಅವರಿಗೆ ಹಲವಾರು ಸಂದರ್ಭಗಳಲ್ಲಿ ಮದುವೆಯ ಮಾಧ್ಯಮಗಳು ಪ್ರಶ್ನೆಗಳನ್ನು ಕೇಳುತ್ತಿದ್ದವು. ಈ ವಿಷಯದ ಬಗ್ಗೆ ಅವರು ಮಾತನಾಡಿದ್ದು ಕಡಿಮೆ. ಈಗ ತೇಜಸ್ವಿ ಸೂರ್ಯ ಅವರ ವಿವಾಹದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.
ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.