ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆಯ ವೇಳೆ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ.
ಕಾರ್ಯಕ್ರಮ ಉದ್ಘಾಟಿಸಲು ವೇದಿಕೆಯಲ್ಲಿ ಮೇಜಿನ ಮೇಲೆ ಇರಿಸಲಾಗಿದ್ದ ದೀಪದಿಂದ ಬೆಂಕಿ ತಗುಲಿದೆ. ಟೇಬಲ್ ಹತ್ತಿರ ಹೋಗುತ್ತಿದ್ದಂತೆ ಸೀರೆ ಕೆಳಗೆ ಇಟ್ಟಿದ್ದ ದೀಪಕ್ಕೆ ತಾಗಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಸುಪ್ರಿಯಾ ಸುಳೆ ಬೆಂಕಿ ನಂದಿಸಿದ್ದಾರೆ.
ನನ್ನ ಬೆಂಬಲಿಗರು, ನಾಗರಿಕರು, ಪಕ್ಷದ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಆತಂಕಪಡಬೇಡಿ, ನಾನು ಸುರಕ್ಷಿತವಾಗಿದ್ದೇನೆ ಎಂದು ಅವರು ಹೇಳಿದ್ದಾರೆ.