Saturday, August 13, 2022

Latest Posts

ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ, ಟ್ಯಾಬ್ ವಿತರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಚಿಕ್ಕಬಳ್ಳಾಪುರ ಅಗಲಗುರ್ಕಿ ಬಿಜಿಎಸ್ ಶಾಲಾ ಕಾಲೇಜು ಆವರಣದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಶಾಲೆಗಳಲ್ಲಿ ಪ್ರಥಮ ರ್‍ಯಾಂಕ್ ಪಡೆದ 35 ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಟ್ಯಾಬ್ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಲ್ಲದೆ ರ್‍ಯಾಂಕ್ ಪಡೆದ 35 ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಿ ಗೌರವಿಸಿ ಆಶೀರ್ವದಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ , ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ , ಶ್ರೀ ಮಂಗಳನಾಥ ಸ್ವಾಮೀಜಿ , ಶ್ರೀ ಶಂಭುನಾಥ ಸ್ವಾಮೀಜಿ , ಚಿಕ್ಕಬಳ್ಳಾಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಜಯರಾಮ ರೆಡ್ಡಿ , ಡಾ. ಎನ್ ಶಿವರಾಮರೆಡ್ಡಿ , ಡಾ. ಶಿವರಾಮ್ , ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss