ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕೆಜಿಎಫ್ 2’ ಬಳಿಕ ಹಲವು ವರ್ಷಗಳಿಂದ ಉದ್ದ ಕೂದಲು ಹಾಗೂ ಗಡ್ಡದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ರಾಕಿಂಗ್ ಸ್ಟಾರ್ ಯಶ್ ಈಗ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಮತ್ತು ಗಡ್ಡವನ್ನು ಶಾರ್ಟ್ ಮಾಡಿ ಸಂಪೂರ್ಣ ವಿಭಿನ್ನ ಲುಕ್ ನಲ್ಲಿ ಬಂದಿದ್ದಾರೆ. ಈ ಹೊಸ ರೂಪ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ‘ಟಿಕೆಟ್’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕೆ ಹೊಂದುವಂತೆ ಅವರು ತಮ್ಮ ಸ್ಟೈಲ್ ಬದಲಿಸಿಕೊಂಡಿದ್ದಾರೆ. ಚಿತ್ರದ ಮೊದಲ ಲುಕ್ ಬಹಿರಂಗವಾದ ನಂತರ ಯಶ್ ಕೂಡ ಸಾರ್ವಜನಿಕವಾಗಿ ಈ ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳ ಗಮನ ಸೆಳೆದಿದೆ.
ಇದನ್ನೂ ಓದಿ:
ಇತ್ತೀಚೆಗೆ ಮುಂಬೈನಲ್ಲಿ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡ ಯಶ್ ಅವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಮತ್ತು ಸಣ್ಣ ಗಡ್ಡದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ವರ್ಷಗಳ ನಂತರ ಯಶ್ ಹೊಸ ಸ್ಟೈಲ್‌ನಲ್ಲಿ ಕಾಣಿಸಿಕೊಂಡಿರುವುದರಿಂದ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಆ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಕೂಡ ಜೊತೆಯಲ್ಲಿದ್ದರು.
‘ಟಾಕ್ಸಿಕ್’ ಸಿನಿಮಾ ಮೊದಲು ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಚಿತ್ರದ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ. ಸದ್ಯ ಯಶ್ ಮುಂಬೈನಲ್ಲಿ ಚಿತ್ರದ ಹಿಂದಿ ಡಬ್ಬಿಂಗ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಹೊಸ ಲುಕ್ ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.



