ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳು ಇದೀಗ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು.ಇದೀಗ ಈ ಹಿನ್ನೆಲೆಯಲ್ಲಿ ಇದೀಗ ಮುರುಘಾ ಶರಣರು ಹೈಕೋರ್ಟ್​ ಮೊರೆ ಹೋಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!