ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ನೋಡೋಣ. ಸುಮ್ಮನೆ ನನ್ನನ್ನು ಕೆಣಕಬೇಡಿ. ಹಿಟ್ ಅಂಡ್ ರನ್ ಮಾಡ್ತಾ ಇರೋದು ನೀವು. ಬಿಜೆಪಿ ಸರಕಾರದ ಮೇಲೆ 40% ಆರೋಪ ಮಾಡಿದಿರಿ. ಆ ಆರೋಪಗಳ ಕಥೆ ಏನಾಯಿತು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೆ? ಎಂದು ಟೀಕಿಸಿದರು.