March 17, 2026
Tuesday, March 17, 2026
spot_img

ಮಿಸಸ್ ದೇವರಕೊಂಡ ಈಗ ಪಕ್ಕಾ ಪ್ರೊಫೆಷನಲ್: ‘ರಣಬಾಲಿ’ಗೂ ಮುನ್ನವೇ ‘ಮೈಸಾ’ ಸೆಟ್‌ಗೆ ಹಾಜರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ರಶ್ಮಿಕಾ ಮಂದಣ್ಣ, ಇತ್ತೀಚೆಗಷ್ಟೇ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ಸಡಗರದ ನಂತರ ಈ ಸ್ಟಾರ್ ಜೋಡಿ ಈಗ ಮತ್ತೆ ಚಿತ್ರರಂಗದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

ಮದುವೆಯ ನಂತರ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜೊತೆ ‘ರಣಬಾಲಿ’ ಸಿನಿಮಾ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ರಶ್ಮಿಕಾ ಈಗ ಎಲ್ಲರಿಗೂ ಸಪ್ರೈಸ್ ನೀಡಿದ್ದು, ತಮ್ಮ ಬಹುನಿರೀಕ್ಷಿತ ‘ಮೈಸಾ’ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಮಾರ್ಚ್ 17 ರಂದು ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿದ್ದು, ಮರುಭೂಮಿಯಂತಹ ಕಠಿಣ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ನಿರ್ದೇಶಕ ರವೀಂದ್ರ ಪುಲ್ಲೆ ಅವರು ‘ದಿ ಹಂಟ್ ಬಿಗಿನ್ಸ್’ ಎಂದು ಬರೆದುಕೊಂಡಿರುವ ಪೋಸ್ಟ್ ಅನ್ನು ರೀ-ಶೇರ್ ಮಾಡುವ ಮೂಲಕ ರಶ್ಮಿಕಾ ತಾವು ಮತ್ತೆ ಕ್ಯಾಮೆರಾ ಎದುರಿಸುತ್ತಿರುವುದನ್ನು ಖಚಿತಪಡಿಸಿದ್ದಾರೆ.

‘ಮೈಸಾ’ ಚಿತ್ರದಲ್ಲಿ ರಶ್ಮಿಕಾ ಹಿಂದೆಂದೂ ಕಾಣದ ಆಕ್ರೋಶಭರಿತ ಹಾಗೂ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, 2026ರಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ. ಇದರ ಜೊತೆಗೆ ‘ಗೀತಾ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ನಂತರ ವಿಜಯ್-ರಶ್ಮಿಕಾ ಜೋಡಿ ಮತ್ತೆ ‘ರಣಬಾಲಿ’ಯಲ್ಲಿ ಒಂದಾಗುತ್ತಿರುವುದು ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !