ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆ: ಕರಾವಳಿಯ ಸುಪ್ರಿಯಾಗೆ ರನ್ನರ್–ಅಪ್ ಕಿರೀಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುವರಿ ಅಂತಿಮ ಹಣಾಹಣಿಯಲ್ಲಿ ಮೊದಲ ರನ್ನರ್–ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಕಡಬ ತಾಲೂಕು ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ.ಕೆ.ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ರವರು ಮೊದಲ ರನ್ನರ್–ಅಪ್ ಕಿರೀಟ ಮುಡಿಗೇರಿಸಿಕೊಂಡರು.

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ವಿವಿಧ ಆಕರ್ಷಣೆಗಳನ್ನು ಹೊಂದಿತ್ತು. ಈ ಸ್ಪರ್ಧೆಯ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷ್‌ನಲ್ಲಿ ಭಾಗವಹಿಸಿದ್ದ ನೂರಾರು ಗೃಹಿಣಿಯರಲ್ಲಿ ಅಂತಿಮವಾಗಿ 14 ಜನರನ್ನು ಮಾತ್ರ ಫೈನಲ್‌ಗೆ ಆಯ್ಕೆ ಮಾಡಲಾಗಿತ್ತು. ಮೇ 22 ರಿಂದ 25 ರ ತನಕ ನಡೆದ ಫೈನಲ್ ಇವೆಂಟ್ ಮೂರು ಸುತ್ತುಗಳನ್ನು ಒಳಗೊಂಡಿತ್ತು.

ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು. ಇದರಲ್ಲಿ ಇವರಿಗೆ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಮೊದಲ ರನ್ನರ್–ಅಪ್ ಕಿರೀಟ ದೊರೆಯಿತು. ಇದರೊಂದಿಗೆ ಬೆಸ್ಟ್ ಕ್ಯಾಟ್ ವಾಕರ್ ವಿನ್ನರ್ ಪ್ರಶಸ್ತಿ ಪಡೆದುಕೊಂಡರು.

ಸುಪ್ರಿಯಾ ಮೋಹನ್‌ರವರು ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಯುಎಸ್ ನ ಐಟಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿ ತಾಲೂಕು ಪಾನತ್ತಲೆ ಮನೆಯ ಅರ್ಜುನ್ ಪಿ.ಜೆಯವರನ್ನು ವಿವಾಹವಾಗಿದ್ದು, 5ವರ್ಷದ ಮಗ ಜಶ್ವಿಕ್‌ರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇದೊಂದಿಗೆ ಇವರು ಪ್ರೊಫೆಷನಲ್ ಬ್ರೈಡಲ್ ಮೇಕಪ್ ಆರ್ಟಿಸ್ಟ್ ಕೂಡ ಹೌದು.

ಮಹಿಳೆಗೆ ಸಮಾಜದಲ್ಲಿ ಹೆಜ್ಜೆ, ಹೆಜ್ಜೆಗೂ ಹಲವು ಸವಾಲುಗಳು ಎದುರಾಗುತ್ತವೆ. ಸಾಧನೆಯ ಹಾದಿಯಲ್ಲಿ ಆಕೆ ಎದುರಿಸುವ ಸವಾಲುಗಳು ಒಂದೆರೆಡಲ್ಲ. ಅದರಲ್ಲೂ ಮದುವೆಯಾದ ಮಹಿಳೆಗೆ ಸಾಧನೆಯೆಂಬುದು ನಿಜಕ್ಕೂ ಸುಲಭ ಸಾಧ್ಯವಲ್ಲ. ಮನೆ, ಗಂಡ, ಮಕ್ಕಳು ಎಂಬ ಪರಿಧಿಯಿಂದ ಆಕೆ ಆಚೆ ಬಂದು ಇದನ್ನೆಲ್ಲಾ ಯೋಚಿಸುವುದೇ ಕಷ್ಟಸಾಧ್ಯ ಹಾಗಾಗಿ ಮದುವೆಯಾದ ಮಹಿಳೆಯರಲ್ಲಿನ ಪ್ರತಿಭೆಗೆ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಇದೀಗ ಐದು ವರ್ಷದ ಮಗುವಿನ ತಾಯಿ ಆಗಿರುವ ಸುಪ್ರಿಯಾ ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!