spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವಕಪ್​ನಲ್ಲಿ ಮಾರ್ಗದರ್ಶಕರಾಗಿ ಎಂಎಸ್ ಧೋನಿ ಯಾವುದೇ ಗೌರವಧನ ಪಡೆಯುತ್ತಿಲ್ಲ: ಜಯ್ ಶಾ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಎಂಎಸ್ ಧೋನಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶಕನಾಗಿ ಆಯ್ಕೆಯಾಗಿದ್ದಾರೆ. ಆದರೆ, ಈ ಹುದ್ದೆಗೆ ಅವರು ಯಾವುದೇ ರೀತಿಯ ಗೌರವ ಧನ ತೆಗೆದುಕೊಳ್ಳುತ್ತಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 17ರಿಂದ ನವೆಂಬರ್​ 14ರವರೆಗೆ ಒಮಾನ್ ಮತ್ತು ಯುಎಇಯಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಭಾರತ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದೆ.
2007ರಲ್ಲಿ ಭಾರತ ತಂಡದ ನಾಯಕರಾಗಿದ್ದ ಎಂಎಸ್ ಧೋನಿ ಅವರನ್ನು ಪ್ರಸ್ತುತ ವಿಶ್ವಕಪ್​ ತಂಡಕ್ಕೆ ಮಾರ್ಗದರ್ಶಕರಾಗಿ ನೇಮಕ ಮಾಡಿದೆ. ಆದರೆ, ಈ ಹುದ್ದೆಗೆ ಧೋನಿ ಯಾವುದೇ ರೀತಿಯ ಗೌರವ ಧನವನ್ನು ಪಡೆಯುತ್ತಿಲ್ಲ ಎನ್ನುವುದನ್ನು ಜಯ್ ಶಾ ಬಹಿರಂಗ ಪಡಿಸಿದ್ದಾರೆ.
2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್​ ಗೆಲುವು ಸಾಧಿಸಿದ ಬಳಿಕ ಭಾರತ ತಂಡ ಮತ್ತೆ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ವಿಫಲವಾಗಿದೆ. ಆದರೆ, ಈ ಬಾರಿ ಶತಾಯಗತಾಯವಾಗಿ ಗೆಲ್ಲಲೇಬೇಕೆಂದು ನಿರ್ಧರಿಸಿದೆ ಭಾರತ ತಂಡ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss