ಚಿತ್ರರಂಗಕ್ಕೆ ಸ್ಟಾರ್‌ ಕ್ರಿಕೆಟಿಗನ ಎಂಟ್ರಿ! ಇದು ನಿಜವೇ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಇತಿಹಾಸದಲ್ಲಿ 50 ಓವರ್‌ಗಳ ವಿಶ್ವಕಪ್, ಟಿ 20 ವಿಶ್ವಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಮೂರು ಪ್ರಮುಖ ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕರಾಗಿದ್ದಾರೆ. ಪ್ರಸ್ತುತ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಧೋನಿ ಐಪಿಎಲ್ ಫ್ರಾಂಚೈಸಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ಯಶಸ್ವಿಯಾಗಿರುವ ಧೋನಿ ಇದೀಗ ಸಿನಿಮಾ ಕ್ಷೇತ್ರಕ್ಕೂ ಕಾಲಿಡಲಿದ್ದಾರೆ. ದಕ್ಷಿಣದಲ್ಲಿ “ಧೋನಿ ಎಂಟರ್‌ಟೈನ್‌ಮೆಂಟ್” ಎಂಬ ಹೆಸರಿನ ಚಲನಚಿತ್ರ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವುದಾಗಿ ‘ಲೆಟ್ಸ್ ಸಿನಿಮಾ’ ಭಾನುವಾರ ತಮ್ಮ ಟ್ವಿಟರ್ ಖಾತೆಯ ಮೂಲಕ ಪ್ರಕಟಿಸಿದೆ. ಧೋನಿ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸಲಿದ್ದಾರೆ.

ಈ ಹಿಂದೆ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಅವರು ‘ರೋರ್ ಆಫ್ ದಿ ಲಯನ್’, ‘ಬ್ಲೇಜ್ ಟು ಗ್ಲೋರಿ’ ಮತ್ತು ‘ದಿ ಹಿಡನ್ ಹಿಂದೂ’ ನಂತಹ ಸಣ್ಣ ಚಿತ್ರಗಳನ್ನು ನಿರ್ಮಿಸಿದ್ದರು. ಈಗ ಪೂರ್ಣ ಪ್ರಮಾಣದ ನಿರ್ಮಾಪಕರಾಗಿ ಸಿನಿಮಾರಂಗದಲ್ಲಿ ತಮ್ಮ ಸಾಮರ್ಥ್ಯ ತೋರಿಸಲು ಸಿದ್ಧರಾಗುತ್ತಿದ್ದಾರೆ. ಮತ್ತು ಕೂಲ್ ಕ್ಯಾಪ್ಟನ್ ಆಗಿ ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯುವ ಧೋನಿ, ಚಿತ್ರರಂಗದಲ್ಲಿ ಎಷ್ಟರ ಮಟ್ಟಿಗೆ ಮಿಂಚಬಹುದು ಎಂಬುದನ್ನು ಕಾದು ನೋಡಬೇಕಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!