ಮುಂದಿನ IPL ಆವೃತ್ತಿಗೂ ಸಿಎಸ್‌ಕೆ ಕ್ಯಾಪ್ಟನ್ ಆಗಿ ಮುಂದುವರೆದ ಎಂ.ಎಸ್.ಧೋನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಲೆಜೆಂಡರಿ ಕ್ರಿಕೆಟಿಗ ಎಂಎಸ್ ಧೋನಿ ಐಪಿಎಲ್ 2023ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ನಾಯಕನಾಗಿ ಮುಂದುವೆಯುತ್ತಾರೋ ಇಲ್ಲವೋ? ಅಭಿಮಾನಿಗಳನ್ನು ಕಾಡುತ್ತಿದ್ದ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಬಗ್ಗೆ ಪ್ರಾಂಚೈಸಿ ಸಿಇಒ ಕಾಶಿ ವಿಶ್ವನಾಥನ್ ಭಾನುವಾರ ಉತ್ತರಿಸಿದ್ದು, ಎಂಎಸ್‌ ಧೋನಿ ಐಪಿಎಲ್‌ 16 ನೇ ಆವೃತ್ತಿಯಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
‘ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಬದಲಾವಣೆ ಆಗುತ್ತದೆ ಎಂದು ನಾವು ಯಾವತ್ತೂ ಹೇಳಿಲ್ಲ. ಐಪಿಎಲ್ 2023 ರಲ್ಲೂ ಧೋನಿ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಸಿಇಒ ಕಾಸಿ ವಿಶ್ವನಾಥನ್ ಹೇಳಿದ್ದಾರೆ.
2022 ರ ಆವೃತ್ತಿಯಲ್ಲಿ ತಂಡ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ಜಡೇಜಾ ಕಳಪೆ ಫಾರ್ಮ್‌ ಹಾಗೂ ತಂಡದ ಸತತ ಸೋಲುಗಳಿಂದ ನಾಯಕತ್ವದಿಂದ ಕೆಳಗಿಳಿದರು. ಆ ಬಳಿಕ ಧೋನಿ ತಂಡವನ್ನು ಮುನ್ನಡೆಸಿದ್ದರು. 15 ನೇ ಆವೃತ್ತಿಯಲ್ಲಿ ತಂಡ ಪ್ಲೇಆಫ್‌ಗೆ ಪ್ರವೇಶಿಸಲು ಸಹ ವಿಫಲವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!