ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ನಲ್ಲಿ 71 ಸಹಾಯಕ ವ್ಯವಸ್ಥಾಪಕ, ಮೇಲ್ವಿಚಾರಕ, ಕ್ಲರ್ಕ್ ಮತ್ತು ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಎಂಎಸ್ಐಎಲ್ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,900/- ರಿಂದ 80,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.