ಮುಡಾ ಹಂಚಿಕೆ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಡಾದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಮುಡಾದಿಂದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಇಡಿ ತಿಳಿಸಿದೆ.

ಕೇಂದ್ರ ತನಿಖಾ ಸಂಸ್ಥೆ ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ಸಂವಹನದಲ್ಲಿ, ಮುಡಾ ಒಟ್ಟು 1,095 ಸೈಟ್‌ಗಳನ್ನು ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ಅಕ್ರಮವಾಗಿ ಮಂಜೂರು ಮಾಡಿದೆ ಎಂಬುದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ.

ತನಿಖೆಯ ವೇಳೆ, ಭೂಪರಿವರ್ತನೆಯಲ್ಲಿ ಕಾನೂನುಬದ್ಧ ಮಾರ್ಗಸೂಚಿಗಳ ಉಲ್ಲಂಘನೆ, ಕಚೇರಿಯ ಕಾರ್ಯವಿಧಾನಗಳ ಉಲ್ಲಂಘನೆ, ಅನಾವಶ್ಯಕ ಕೃಪಾಕಟಾಕ್ಷ ಮತ್ತು ಪ್ರಭಾವದ ಬಳಕೆ ಹಾಗೂ ಸಹಿಗಳ ಫೋರ್ಜರಿ’ಗೆ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್ ಜಿ ದಿನೇಶ್ ಕುಮಾರ್ ಅಲಿಯಾಸ್ ಸಿ ಟಿ ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಇಡಿ ಹೇಳಿಕೊಂಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!