ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ.
ಪಾರ್ವತಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮುರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅರ್ಜಿಯನ್ನು ವಜಾಗೊಳಿಸಿದೆ.