ಮುಡಾ ಪ್ರಕರಣ: ಸಿದ್ದರಾಮಯ್ಯ ರಾಜೀನಾಮೆ ನೀಡುವಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಮುಡಾ ಅಕ್ರಮ ಖಂಡಿಸಿ ಬಿಜೆಪಿ ವತಿಯಿಂದ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬಡವರಿಗಾಗಿ ಸಿಎಂ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಬಡವರಿಗೆ ಭೂಮಿ ಮಂಜೂರು ಮಾಡಬೇಕು. ಈಗಾಗಲೇ ಮಾಡಿರುವ ಭೂ ಮಂಜೂರಾತಿ ರದ್ದುಗೊಳಿಸಬೇಕು. ಸಿಎಂ ಮತ್ತು ಅವರ ಪತ್ನಿ ವಿರುದ್ಧ ಆರೋಪ ಕೇಳಿಬಂದಿರುವುದರಿಂದ ಮತ್ತೊಂದು ಎಸ್‌ಐಟಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದ್ದಾರೆ.

ಬಡವರು, ದಲಿತರು ಮತ್ತು ಸಮುದಾಯಗಳಿಗೆ ಮೀಸಲಿಟ್ಟ ಭೂಮಿಯನ್ನು ಅವರ ಅಗತ್ಯಗಳ ಆಧಾರದ ಮೇಲೆ ಹಂಚಿದ್ದಾರೆ. ಅವರು ಸಿಬಿಐ ತನಿಖೆ ಮಾತ್ರವಲ್ಲದೆ ಸಿಎಂ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ಸದನದಲ್ಲೂ ಈ ವಿಚಾರ ಕೈಗೆತ್ತಿಕೊಳ್ಳುತ್ತೇವೆ. ಸದನದ ಹೊರಗೆ ಕೂಡ ಈ ಸಂಬಂಧ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!