ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್ ನೀಡಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ. ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.