ಮುಡಾ ಕೇಸ್: ಮಾಜಿ ಆಯುಕ್ತ ನಟೇಶ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಡಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್​ ಅವರ​ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ.

ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸರ್ಕಾರಿ ಅಧಿಕಾರಿ‌ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ 17(A) ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಒಂದು ತಿಂಗಳ ಹಿಂದೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿದ್ದರು. ಇದೀಗ ಅನುಮತಿ ನೀಡಿದ್ದು, ನಟೇಶ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಅವರು, ಸೈಟ್ ಮರು ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!