ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ಹಾಗೂ ಅಧಿಕರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
75225 ಚದರ ಅಡಿಯ ಜಾಗವನ್ನು ಕ್ಯಾಥಡ್ರೆಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಕ್ರಮ ಕೈಗೊಂಡಿರುವ ಸರ್ಕಾರ, ದೋಷಾರೋಪಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ.