ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜ.25ಕ್ಕೆ ಮುಂದೂಡಿಕೆ ಮಾಡಿದೆ.
ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜರಿಯಾ ನೇತೃತ್ವದ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಏಕಸದಸ್ಯ ಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.