ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋರ್ಟ್ ನಲ್ಲಿ ಇಂದು ಮುಡಾ ಭ್ರಷ್ಟಾಚಾರ ಕೇಸ್ ವಿಚಾರಣೆ ಹಿನ್ನೆಲೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.
ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಳ್ಳಲಿಲ್ಲ.
ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ.