ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ರದ್ದು ಕೋರಿ ಪಾರ್ವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದಿಂದ ಸಿಎಂ ಪತ್ನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗಿತ್ತು.
ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದರು.