ಮುಡಾ ಕೇಸ್‌: ಸಿಎಂಗೆ ಹೈಕೋರ್ಟ್​ ನೋಟಿಸ್, ನ.26ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ ನಡೆಸುವಂತೆ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್​ 26ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!