ಕಾಂಗ್ರೆಸ್​ ಹೈಕಮಾಂಡ್ ಅಂಗಳದಲ್ಲಿ ಮುಡಾ ಕೇಸ್: ದೆಹಲಿಯಲ್ಲಿ ಸಿದ್ದು-ಡಿಕೆಶಿ ಸಭೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ರಾಜಕೀಯ ಸಂರ್ಘಷಕ್ಕೆ ನಾಂದಿ ಹಾಡಿದೆ.

ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಹೈಕಮಾಂಡ್​ಅನ್ನು ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿರುವ ಕಾಂಗ್ರೆಸ್​ ಹೈ ಕಮಾಂಡ್​ ಸಿಎಂ ಸಿದ್ದರಾಯ್ಯಗೆ ಫುಲ್​ ಸಪೋರ್ಟ್​ ನೀಡುವುದಾಗಿ ಹೇಳಿದ್ದಾರೆ.

ಇದರ ಜೊತೆಗೆ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಚಾರ್ಜ್​ಶೀಟ್​ ಸಲ್ಲಿಸಿದ್ದು, ಇದರಲ್ಲಿ ಶಾಸಕರಾದ ದದ್ದಲ್​ ಹಾಗೂ ನಾಗೇಂದ್ರ ಅವರ ಹೆಸರನ್ನು ಕೈ ಬಿಡಲಾಗಿದ್ದು, ಕ್ಲೀನ್​ ಚಿಟ್​ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಎರಡು ವಿಚಾರಕ್ಕೆ ಸಂಬಂಧಿಸಿದಂತೆ ದೋಸ್ತಿ ನಾಯಕರಿಗೆ ಟಕ್ಕರ್​ ಕೊಡಲು ಕೈ ನಾಯಕರು ಯೋಜನೆ ರೂಪಿಸುತ್ತಿದ್ದು, ಮುಂದಿನ ನಡೆಯ ಕುರಿತು ಹೈಕಮಾಂಡ್​ ಜೊತೆ ಚರ್ಚಿಸುತ್ತಿದ್ದಾರೆ.

ಇದರ ಜೊತೆಗೆ ಮುಂಬರುವ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ, ಬಿಬಿಎಂಪಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆ ತಯಾರಿ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಭೆಯ ನಂತರ ಅಧಿಕೃತವಾಗಿ ತಿಳಿಯಲಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!