ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೀಗ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟಗಳ ಸರಮಾಲೆ ಶುರುವಾಗಿದೆ. ಜನತಾ ನ್ಯಾಯಾಲಯದ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸಿಆರ್ ಪಿಸಿ ಕಲಂ 156(3)ರ ಅಡಿಯಲ್ಲಿ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನತಾ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.