ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಇಳಿದ ಅಧಿಕಾರಿಗಳಿಂದ ಮೊದಲ ನೋಟಿಸ್ ಜಾರಿ ಮಾಡಲಾಗಿದೆ.
ನಾಳೆ ಬೆಳಗ್ಗೆ 7.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೋಟಿಸ್ ನೀಡಿದ್ದಾರೆ.