ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣ ರಾಜಕೀಯ ಪ್ರೇರಿತ ಆರೋಪ. ಇದು ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ.ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದು ತಿಳಿಸಿದರು.